ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ವಿವೇಕಾನಂದ ಪದವಿ ಪೂರ್ವ ಕಾಲೇಜು, ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟವು ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು.
ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಜೀವನ್ ದಾಸ್ ಮಾತನಾಡಿ ಕಠಿಣ ಪರಿಶ್ರಮ ಮತ್ತು ಕ್ರೀಡಾಸ್ಫೂರ್ತಿಯಿಂದ ಮಾತ್ರ ಕ್ರೀಡೆಯಲ್ಲಿ ಸಾಧಿಸಲು ಸಾಧ್ಯ. ಕ್ರೀಡೆಯಲ್ಲಿ ಪರಿಣಿತರಾದವರಿಗೆ ಶ್ಯೆಕ್ಷಣಿಕ ಕ್ಷೇತ್ರದಲ್ಲೂ ಹಲವಾರು ಅವಕಾಶಗಳಿವೆ. ಭಾಗವಹಿಸಿದ ಎಲ್ಲಾ ಕ್ರೀಡಾಪಟುಗಳಿಗೆ ಉಜ್ವಲ ಭವಿಷ್ಯವಿದೆ. ಕ್ರೀಡೆಯ ಮುಂದಿನ ಹಂತದ ಸ್ಪರ್ಧೆಗಳಿಗೆ ತಯಾರಿಯನ್ನು ಮಾಡಿಕೊಳ್ಳಬೇಕು ಎಂದರು.
ಬಾಲಕರ ವಿಭಾಗದಲ್ಲಿ ಒಟ್ಟು 21 ತಂಡಗಳು ಹಾಗೂ ಬಾಲಕಿಯರ ವಿಭಾಗದಲ್ಲಿ 5 ತಂಡಗಳು ಭಾಗವಹಿಸಿದ್ದವು. ಬಾಲಕರ ವಿಭಾಗದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜು ಪ್ರಥಮ ಸ್ಥಾನವನ್ನು, ಶ್ರೀ ಕೃಷ್ಣ ಪದವಿಪೂರ್ವ ಕಾಲೇಜು, ಪಟ್ಟೆ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ. ಬಾಲಕಿಯರ ವಿಭಾಗದಲ್ಲಿ ಶ್ರೀ ಗಜಾನನ ಪದವಿಪೂರ್ವ ಕಾಲೇಜು, ಈಶ್ವರಮಂಗಲ ಪ್ರಥಮ ಸ್ಥಾನವನ್ನು, ಸರಕಾರಿ ಪದವಿಪೂರ್ವ ಕಾಲೇಜು, ಕುಂಬ್ರ ದ್ವಿತೀಯ ಸ್ಥಾನದ ಪ್ರಶಸ್ತಿಯನ್ನು ಪಡೆದುಕೊಂಡಿದೆ.
ವಿಜೇತರಿಗೆ ಬಹುಮಾನ ವಿತರಣೆಯನ್ನು ವಿವೇಕಾನಂದ ಪದವಿ ಕಾಲೇಜಿನ NCC ಕ್ಯಾಪ್ಟನ್ ಮಹೇಶ್ ರೈ ನೆರವೇರಿಸಿದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ| ರವಿಶಂಕರ್ ಕಾರ್ಯಕ್ರಮವನ್ನು ನಿರೂಪಿಸಿ ಡಾ| ಜ್ಯೋತಿ ವಂದಿಸಿದರು.