Notice Board :

ವಾರ್ಷಿಕ ಕ್ರೀಡಾಕೂಟ

October 26, 2018

ಆಲೋಚನೆಗಳು, ನಿರ್ಧಾರಗಳು ಅಚಲವಾಗಿದ್ದಾಗ ಸಾಧನೆಯ ಉತ್ತುಂಗಕ್ಕೆ ಏರಲು ಸಾಧ್ಯ- ಆನಂದ ಶೆಟ್ಟಿ

ಪ್ರತಿಯೊಬ್ಬ ವಿದ್ಯಾರ್ಥಿಯು ತಮ್ಮಲ್ಲಿರುವ ಪ್ರತಿಭೆಯನ್ನು ಅವಕಾಶ ಸಿಕ್ಕಿರುವಾಗ ಬಳಸಿಕೊಳ್ಳಬೇಕು. ಒಬ್ಬ ವಿದ್ಯಾರ್ಥಿಗೆ ಅವನ ವಿದ್ಯಾರ್ಥಿ ದಿಸೆಯಲ್ಲಿ ಹತ್ತು ಹಲವು ಅವಕಾಶಗಳು ಅರಸಿಕೊಂಡು ಬರುತ್ತವೆ. ತನ್ನ ಸಾಮರ್ಥ್ಯವನ್ನು ಅರಿತುಕೊಂಡು ಈ ದಿಸೆಯಲ್ಲಿ ದಿಟ್ಟ ಹೆಜ್ಜೆಗಳನ್ನು ಇರಿಸಬೇಕು. ಆಲೋಚನೆಗಳು, ನಿರ್ಧಾರಗಳು ಅಚಲವಾಗಿದ್ದಾಗ ಸಾಧನೆಯ ಉತ್ತುಂಗಕ್ಕೆ ಏರಲು ಸಾಧ್ಯ ಎಂದು ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಆನಂದ ಶೆಟ್ಟಿ ಹೇಳಿದರು.

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ನಡೆದ 2018-19 ನೇ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.

Ananda-Shetty-speaking

Sports-torch-handover-to-Anand-shetty

ವೈಯಕ್ತಿಕ ಓರೆಕೋರೆಗಳನ್ನು ತಿದ್ದಿಕೊಂಡು ಹೊಂದಾಣಿಕೆಯ ಮನೋಭಾವವನ್ನು ಬೆಳೆಸಿಕೊಳ್ಳಲು ಕ್ರೀಡೆ ನೆರವಾಗುತ್ತದೆ. ದೈಹಿಕ, ಮಾನಸಿಕ ಬೆಳವಣಿಗೆಗೆ ಸಹಾಯ ಮಾಡುತ್ತದೆ. ಈ ಮೂಲಕ ಧೈರ್ಯ ಮತ್ತು ಸಾಹಸ ಗುಣಗಳನ್ನು ವೃದ್ಧಿಸುತ್ತದೆ. ಕ್ರೀಡಾಕ್ಷೇತ್ರವು ಇಚ್ಛಾಶಕ್ತಿ, ಏಕಾಗ್ರತೆ ಮತ್ತು ಸ್ಪರ್ಧಾ ಮನೋಭಾವವನ್ನು ಬೆಳೆಸುತ್ತದೆ. ನಿರಂತರವಾದ ಕಠಿಣ ಪ್ರಯತ್ನದಿಂದ ಮಾತ್ರ ಸಾಧನೆ ಮಾಡಲು ಸಾಧ್ಯ. ಸೋಲು ಕೊನೆಯಲ್ಲ. ಸೋಲೇ ಗೆಲುವಿನ ಸೋಪಾನ. ಕ್ರೀಡೆಯಲ್ಲಿ ಪರಿಣಿತರಾದವರಿಗೆ ಶ್ಯೆಕ್ಷಣಿಕ ಕ್ಷೇತ್ರದಲ್ಲೂ ಹಲವಾರು ಅವಕಾಶಗಳಿವೆ. ಭಾಗವಹಿಸಿದ ಎಲ್ಲಾ ಕ್ರೀಡಾಪಟುಗಳಿಗೆ ಉಜ್ವಲ ಭವಿಷ್ಯವಿದೆ ಎಂದರು.

ಅಧ್ಯಕ್ಷ ಸ್ಥಾನವನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲ ಜೀವನ್‌ದಾಸ್ ಮಾತನಾಡಿ ಕ್ರೀಡೆಯಿಂದ ಶಿಸ್ತು, ಸಂಯಮ ಮತ್ತು ಆರೋಗ್ಯ ವೃದ್ಧಿಸುತ್ತದೆ. ಕ್ರೀಡೆಯಲ್ಲಿ ಗೆಲ್ಲಲು ಉತ್ತಮ ತರಬೇತಿ ಅಗತ್ಯ. ಪರಿಣತಿಯನ್ನು ಗಳಿಸಲು ಸತತ ಸಾಧನೆ ಮಾಡಬೇಕು.ಕ್ರೀಡೆಯಲ್ಲಿ ಪಾಲ್ಗೊಳ್ಳುವಂತೆ ಪ್ರೋತ್ಸಾಹಿಸಿ ಶುಭ ಕೋರಿದರು.

ಕಾರ್ಯಕ್ರಮದಲ್ಲಿ ದೈಹಿಕ ಶಿಕ್ಷಣ ನಿರ್ದೇಶಕ ರವಿಶಂಕರ್, ಜ್ಯೋತಿ ,ಯತೀಶ್,ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.

ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಕ್ರೀಡಾಪಟು ದೀಕ್ಷಾ, ಅಕ್ಷಯ್, ಶ್ರದ್ಧಾ, ಕಿಶನ್, ಸಂಪತ್ ಕುಮಾರ್, ಪಂಚಮಿ ಸರ್ಪಂಗಳ, ರತನ್, ರಾಜ್ಯಮಟ್ಟಕ್ಕೆ ಆಯ್ಕೆಯಾದ ಪ್ರತೀಕ್ ರಾಜ್ , ತೀರ್ಥಕುಮಾರ್, ವೇದಾಂತ್ ಸಿಂಗ್ ಕ್ರೀಡಾಜ್ಯೋತಿಯನ್ನು ತರುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಉಪಪ್ರಾಂಶುಪಾಲ ಪಿ.ಕೆ.ಪರಮೇಶ್ವರ ಶರ್ಮ ಕಾರ್ಯಕ್ರಮವನ್ನು ನಿರೂಪಿಸಿದರು. ಕ್ರೀಡಾ ಸಂಘದ ಕಾರ್ಯದರ್ಶಿ ಅಕ್ಷಯ್ ಕುಮಾರ್ ಕ್ರೀಡಾ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ವಿದ್ಯಾರ್ಥಿ ಜನಾರ್ಧನ ಅತಿಥಿಗಳನ್ನು ಸ್ವಾಗತಿಸಿದರು. ಕ್ರೀಡಾ ಸಂಘದ ಜತೆ ಕಾರ್ಯದರ್ಶಿ ಶ್ರದ್ಧಾ ವಂದಿಸಿದರು.

Related News

#Dreams 2024 #ConcludingCeremony #Day2

#Dreams 2024 #Session #Day1

#Dreams 2024 #Inauguration #Day1

Apply Now

Seize the Opportunity – Embark on an Unforgettable Educational Adventure!

Sri Sudheer M K

Studied B.Sc. (P.E.M.) in St. Aloysius College Mangalore.

Completed M. Sc. Mathematics from Mangalore University in May 2001.

Having 21 years of teaching experience in different colleges in Mysore and Mangalore. Training students for KCET, JEE exams.

Mathematics

Dr. Sushanth V Rai

M.Sc., PhD 5 years exp. Five years record of success in nutritional, phytochemical and biomedical research.

Worked as quality control analyst in food industry.

Worked as Research Associate in Aquatic Environment Management Department, College of Fisheries, Mangalore.

Worked as Senior Research Fellow in Department of Biosciences, Mangalore University.

Published research papers in national and international journals.

Biology