ಕ್ರಿಯಾತ್ಮಕವಾಗಿ ಯೋಜನೆಗಳನ್ನು ರೂಪಿಸಿಕೊಂಡು ಅದನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ನಮ್ಮ ಗುರಿಯನ್ನು ಸಾಧಿಸಲು ಸಾಧ್ಯ ಎಂದು ಸಂತ ಅಲೋಶಿಯಸ್ ಪದವಿ ಕಾಲೇಜಿನ ನಿವೃತ್ತ ಉಪಪ್ರಾಂಶುಪಾಲರಾದ ಪ್ರೊ. ರೊನಾಲ್ಡ್ ಪಿಂಟೋ ತಿಳಿಸಿದರು.
ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವಿಜ್ಞಾನ ಸಂಘದ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ನಡೆದ ವ್ಯಕ್ತಿತ್ವ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿ ಕಲಿಯುವಿಕೆಯ ವಿವಿಧ ಹಂತಗಳನ್ನು ಪರಿಚಯಿಸಿಕೊಟ್ಟರು. ಪಿಯುಸಿ ನಂತರ ಲಭ್ಯವಿರುವ ವಿವಿಧ ಕೋರ್ಸ್‌ಗಳು ಹಾಗೂ ಸ್ಫರ್ಧಾತ್ಮಕ ಪರೀಕ್ಷೆಗಳ ಮಾಹಿತಿಯನ್ನು ಈ ಸಂದರ್ಭದಲ್ಲಿ ಒದಗಿಸಿಕೊಟ್ಟರು.
ಸಮಾರಂಭದಲ್ಲಿ ವಿಜ್ಞಾನ ಸಂಘದ ಸಂಯೋಜಕರಾದ ಶ್ರೀ ಪ್ರಸಾದ್ ಶ್ಯಾನಭಾಗ್, ಪ್ರಾಂಶುಪಾಲರಾದ ಶ್ರೀ ಜೀವನ್ ದಾಸ್ ಉಪಸ್ಥಿತರಿದ್ದರು.ಭೌತಶಾಸ್ತ್ರ ವಿಭಾಗದ ಉಪನ್ಯಾಸಕಿ ಶ್ರೀಮತಿ ಸ್ವಾತಿ ಬಿ.ಎಸ್ ಸ್ವಾಗತಿಸಿದರು. ಗಣಿತಶಾಸ್ತ್ರ ವಿಭಾಗದ ಉಪನ್ಯಾಸಕಿ ಶ್ರೀಮತಿ ಚೈತ್ರ ಯು.ನ್ ವಂದಿಸಿದರು.